ಮೈಸೂರು, ಆ 25 (DaijiworldNews/PY): "ರಾಜ್ಯದ ಮಸೀದಿಗಳಲ್ಲಿ ಶುಕ್ರವಾರ ಹಾಗೂ ಚರ್ಚ್ಗಳಲ್ಲಿ ಭಾನುವಾರ ಪ್ರಾರ್ಥನೆಗೆ ಅವಕಾಶ ನೀಡಿದ್ದು, ಗಣೆಶೋತ್ಸವಕ್ಕೆ ನಮಗೂ ಅವಕಾಶ ನೀಡಲಿ" ಎಂದು ಸಂಸದ ಪ್ರತಾಪ್ ಸಿಂಹ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದ ಮಸೀದಿಗಳಲ್ಲಿ ಶುಕ್ರವಾರ ಸಾಮೂಹಿಕ ನಮಾಜ್ ಮಾಡುತ್ತಿದ್ದಾರೆ. ಭಾನುವಾರ ಚರ್ಚ್ಗಳಲ್ಲಿ ಪ್ರಾರ್ಥನೆ ನಡೆಯುತ್ತಿದೆ. ಅಲ್ಲಿ ಪ್ರಾರ್ಥನೆ ನಡೆಸಲು ಅವಕಾಶ ನೀಡಿದ್ದೀರಿ ಎನ್ನುವುದಾದರೆ ಗಣೇಶೋತ್ಸವಕ್ಕೂ ಅವಕಾಶ ಕಲ್ಪಿಸಲಿ" ಎಂದಿದ್ದಾರೆ.
"ಗಣೇಶೋತ್ಸವ ಅದ್ದೂರಿಯಾಗಿ ನಡೆಯಬೇಕು ಎಂದು ನಾನು ಹೇಳುತ್ತಿಲ್ಲ. ಕೊರೊನಾ ಮಾರ್ಗಸೂಚಿಯ ಪ್ರಕಾರ ಗಣೇಶೋತ್ಸವಕ್ಕೆ ಅವಕಾಶ ಮಾಡಿಕೊಡಿ" ಎಂದು ಒತ್ತಾಯಿಸಿದ್ದಾರೆ.