ಮೈಸೂರು, ಆ 25 (DaijiworldNews/PY): ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರದ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.
ಸಾಂದರ್ಭಿಕ ಚಿತ್ರ
ವಿದ್ಯಾರ್ಥಿನಿಯು ಸ್ನೇಹಿತನೊಂದಿಗೆ ಬೆಟ್ಟಕ್ಕೆ ತೆರಳಿದ್ದ ವೇಳೆ 6 ಮಂದಿ ದುಷ್ಕರ್ಮಿಗಳು ಯುವಕನಿಗೆ ಹಲ್ಲೆ ಮಾಡಿ ನಂತರ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರ ಎನ್ನಲಾಗಿದೆ.
ಸದ್ಯ, ವಿದ್ಯಾರ್ಥಿನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ನಡೆದಿದೆ ಎನ್ನಲಾದ ಸ್ಥಳದಲ್ಲಿ ಬೀದಿದೀಪ ಬೇಕು ಎಂದು ಮನವಿ ಮಾಡಿದ್ದೆ. ಆದರೆ ಯಾರೂ ನನ್ನ ಮನವಿ ಪರಿಗಣಿಸಲಿಲ್ಲ ಎಂದಿದ್ದಾರೆ.
ಈ ಸಂಬಂಧ ಆಲನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.