ದೆಹಲಿ, ಆ. 25 (DaijiworldNews/SM): ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಪ್ರಕರಣ ದಾಖಲಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರೋಪಿಗಳು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ ನೀಡಿದ್ದೇನೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿದ್ಯಾರ್ಥಿಯ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ವಿದ್ಯಾರ್ಥಿನಿ ಹೇಳಿದ್ದು, ಸದ್ಯ ಆಸ್ಪತ್ರೆಯಲ್ಲಿ ಆಕೆ ದಾಖಲಾಗಿದ್ದಾಳೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾಳೆ. ವಿದ್ಯಾರ್ಥಿಯ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.