ನವದೆಹಲಿ, ಆ 26 (DaijiworldNews/PY): ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, "ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿದ್ದು, ಮುಂದಿನ ಅಲೆಯಲ್ಲಿ ಗಂಭೀರವಾದ ಪರಿಣಾಮಗಳನ್ನು ತಪ್ಪಿಸಲು ಲಸಿಕೀಕರಣ ವೇಗವನ್ನು ಹೆಚ್ಚಿಸಬೇಕು" ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ಆತಂಕವನ್ನುಂಟು ಮಾಡುತ್ತಿವೆ. ಮುಂದಿನ ಅಲೆಯಲ್ಲಿ ಗಂಭೀರವಾದ ಪರಿಣಾಮವನ್ನು ತಪ್ಪಿಸಲು ಲಸಿಕೀಕರಣ ವೇಗವನ್ನು ಹೆಚ್ಚಿಸಬೇಕು. ದಯವಿಟ್ಟು ನಿಮ್ಮ ಕಾಳಜಿಯನ್ನು ನೀವೇ ವಹಿಸಿ, ಏಕೆಂದರೆ, ಭಾರತ ಸರ್ಕಾರ ಮಾರಾಟದಲ್ಲಿ ನಿರತವಾಗಿದೆ" ಎಂದು ಹೇಳಿದ್ದಾರೆ.
"ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,164 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದೆ. ಕಳೆದ ಒಂದೇ ದಿನದಲ್ಲಿ 607 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ" ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.