ನವದೆಹಲಿ, ಆ 26 (DaijiworldNews/MS): ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ನ ಕೊಲಿಜಿಯಂ ಶಿಫಾರಸು ಮಾಡಿದ್ದ ಮೂವರು ಮಹಿಳೆಯರು ಸೇರಿದಂತೆ ಎಲ್ಲಾ 9 ಹೆಸರುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹಾಗೂ ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಮ ನಾಥ್ ಮತ್ತು ನ್ಯಾಯಮೂರ್ತಿ ಬೆಲಾ ತ್ರಿವೇದಿ, ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ, ಸಿಕ್ಕಿಂ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜಿ.ಕೆ. ಮಹೇಶ್ವರಿ, ಕೇರಳ ಹೈಕೋರ್ಟ್ ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ಮದ್ರಾಸ್ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ಎಂ.ಸುಂದರೇಶ್ ಹಾಗೂ ಹಿರಿಯ ವಕೀಲ ಪಿ.ಸಿ.ನರಸಿಂಹ ಇವರ ಹೆಸರುಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು
ಈ ಪೈಕಿ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗುವ ಸಾಧ್ಯತೆ ಹೆಚ್ಚಿದೆ.