ಬೆಂಗಳೂರು, ಆ 26 (DaijiworldNews/PY): "ರೇಪ್ ನಡೆದಿರೋದು ಮೈಸೂರಿನಲ್ಲಿ. ಆದರೆ, ಕಾಂಗ್ರೆಸ್ಸಿಗರು ನನ್ನ ಮೇಲೆ ರೇಪ್ ಮಾಡಲು ಯತ್ನಿಸುತ್ತಿದ್ದಾರೆ" ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅತ್ಯಾಚಾರ ನಡೆದಿರುವುದು ಮೈಸೂರಿನಲ್ಲಿ. ಆದರೆ, ಕಾಂಗ್ರೆಸ್ನವರು ನನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದಾರೆ. ಈ ಘಟನೆಯಿಂದ ಕಾಂಗ್ರೆಸ್ನವರು ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದ್ದಾರೆ" ಎಂದಿದ್ದಾರೆ.
"ಯುವಕ ಹಾಗೂ ಯುವತಿ ಸಂಜೆ 7.30ರ ವೇಳೆಗೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಆದರೆ, ಅವರನ್ನು ಹೋಗಬಾರದು ಎಂದು ತಡೆಯುವುದಕ್ಕೂ ಆಗುತ್ತಿರಲಿಲ್ಲ. ಅತ್ಯಾಚಾರ ಆರೋಪಿಗಳ ಪತ್ತೆಗಾಗಿ ತನಿಖಾ ತಂಡ ರಚಿಸಲಾಗಿದೆ" ಎಂದು ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಗ ಜ್ಞಾನೇಂದ್ರ ಅವರು ಬಾಲಿಷವಾಗಿ ಮಾತನಾಡಿದ್ದಾರೆ. ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.