ಬೆಂಗಳೂರು, ಆ 27 (DaijiworldNews/PY): ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಇಂದು ಶುಭಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಪಕ್ಷವು ತಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಇನ್ನಷ್ಟು ಬಲಗೊಳ್ಳಲಿ, ಸರ್ವ ವ್ಯಾಪಿ ಸರ್ವ ಸ್ಪರ್ಶಿಯಾಗಿ ಬೆಳೆಯಲಿ ಎಂದು ಶುಭ ಹಾರೈಸುತ್ತೇನೆ" ಎಂದಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಜಯ ಸಾಧಿಸುವ ಮುಖೇನ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ನರೇಂದ್ರ ಮೋದಿ ಅಲೆಯಲ್ಲಿ 2,74,621 ಮತಗಳ ಅಂತರದಿಂದ ನಳಿನ್ ಕುಮಾರ್ ಕಟೀಲ್ ಅವರು ಮೂರನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದಾರೆ.
2019ರ ಆಗಸ್ಟ್ನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆದೇಶ ಹೊರಡಿಸಿದ್ದರು.