ಡೆಹ್ರಾಡೂನ್, ಆ.27 (DaijiworldNews/HR): ಉತ್ತರಾಖಂಡದ ಇಬ್ಬರು ಅಧಿಕಾರಿಗಳು ಕುಂಭಮೇಳ ನಕಲಿ ಕೊರೊನಾ ಪರೀಕ್ಷಾ ಹಗರಣದಲ್ಲಿ ಭಾಗಿಯಾಗಿದ್ದು, ಅವರಿಬ್ಬರನ್ನು ಅಮಾನತುಗೊಳಿಸಲಾಗಿದೆ.
ಕುಂಭಮೇಳ
ಆಗಿನ ಮೇಳ ಅಧಿಕಾರಿ (ವೈದ್ಯಕೀಯ ಮತ್ತು ಆರೋಗ್ಯ) ಡಾ.ಅರ್ಜುನ್ ಸಿಂಗ್ ಸೆಂಗಾರ್ ಮತ್ತು ಆಗಿನ ಉಸ್ತುವಾರಿ ಅಧಿಕಾರಿ (ವೈದ್ಯಕೀಯ ಮತ್ತು ಆರೋಗ್ಯ) ಡಾ.ಎನ್.ಕೆ ತ್ಯಾಗಿ ಅವರನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಆದೇಶ ಹೊರಡಿಸಿದ್ದಾರೆ.
ಕುಂಭಮೇಳದಲ್ಲಿ ನಕಲಿ ಕೊರೊನಾ ಪರೀಕ್ಷಾ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸಲು ಹರಿದ್ವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ತನಿಖಾ ಸಮಿತಿಯನ್ನು ರಚಿಸಿದ್ದರು. ಈ ಸಮಿತಿಯ ಶಿಫಾರಸ್ಸುಗಳನ್ನು ಆಧಾರಿಸಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇನ್ನು ಕುಂಭಮೇಳದಲ್ಲಿ ನಕಲಿ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯನ್ನು ನಡೆಸಿದ ಕಂಪನಿಯೊಂದಿಗೆ ಅಧಿಕಾರಿಗಳು ಕೈಜೋಡಿಸಿದ್ದರು ಎಂಬುದನ್ನು ತನಿಖಾ ಸಮಿತಿಯು ಕಂಡುಕೊಂಡಿದ್ದು, ಸರ್ಕಾರಕ್ಕೆ ಆರ್ಥಿಕ ನಷ್ಟವನ್ನುಂಟು ಮಾಡಿದ ಮತ್ತು ಅಜಾಗೂರಕತೆ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸಮಿತಿ ಸಲಹೆ ನೀಡಿತ್ತು.