ನವದೆಹಲಿ, ಆ.27 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ನೂತನ ಕೃಷಿ ಕಾಯ್ದೆಗಳು ಕೃಷಿ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಮತ್ತೆ ಪುನರುಚ್ಚರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾತನಾಡಿರುವ ರಾಹುಲ್, "ಹೊಲಗಳು ಮರಳು ಆಗಲು ಬಿಡುವುದಿಲ್ಲ, ಅದನ್ನು ಬಿಜೆಪಿ ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲು ಬಿಡುವುದಿಲ್ಲ. ಕೃಷಿ ವಿರೋಧಿ ಕಾನೂನುಗಳನ್ನು ಹಿಂಪಡೆಯಿರಿ" ಎಂದಿದ್ದಾರೆ.
ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಒಂಬತ್ತು ತಿಂಗಳು ಪೂರ್ಣಗೊಂಡಿದ್ದು, ಈ ನಡುವೆ ರೈತರ ಪರ ಮಗದೊಮ್ಮೆ ಧ್ವನಿ ಎತ್ತಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ಬಂಡವಾಳಶಾಹಿಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನು ಕೇಂದ್ರ ಸರ್ಕಾರವು ಕೃಷಿ ಭೂಮಿಯನ್ನು ತಮ್ಮ ಸ್ನೇಹಿತರಿಗೆ ಹಸ್ತಾಂತರಿಸುವ ಹುನ್ನಾರವನ್ನು ಹೊಂದಿದೆ. ಕೃಷಿ ವ್ಯವಸ್ಥೆಯನ್ನು ನಾಶಗೊಳಿಸಲು ನೂತನ ಕಾನೂನು ರಚಿಸಲಾಗಿದೆ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದರು.