ಬೆಂಗಳೂರು, ಆ.27 (DaijiworldNews/HR): ಯಾವುದೇ ವಿಷಯಗಳ ಬಗ್ಗೆ ಹೋರಾಟಗಾರ್ತಿಯ ರೀತಿಯಲ್ಲಿ ತಾವು ಈಗ ಮಾತನಾಡಲು ಆಗುವುದಿಲ್ಲ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, "ನಾನು ಈಗ ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಹೋರಾಟಗಾರ್ತಿಯಂತೆ ಮಾತನಾಡಲು ಆಗುವುದಿಲ್ಲ" ಎಂದರು.
ಇನ್ನು ಮೈಸೂರಿನಲ್ಲಿ ಅತ್ಯಾಚಾರ ನಡೆದಿರುವ ಮಾಹಿತಿ ತಿಳಿದ ತಕ್ಷಣ ಮೈಸೂರು ನಗರ ಪೊಲೀಸ್ ಕಮಿಷನರ್ ಮತ್ತು ಅಲ್ಲಿನ ಜಿಲ್ಲಾಧಿಕಾರಿಯವರನ್ನು ಸಂಪರ್ಕಿಸಿ ಚರ್ಚೆ ನಡೆಸಲಾಗಿದ್ದು, ಕೃತ್ಯ ಎಸಗಿದವರ ಬಂಧನ ಮತ್ತು ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.