ಮೈಸೂರು, ಆ 28 (DaijiworldNews/PY): ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಹೊರವಲಯದ ಲಲಿತಾದ್ರಿಪುರ ಸಮೀಪ ಆಗಸ್ಟ್ 24ರಂದು ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 85 ಗಂಟೆಯ ಬಳಿಕ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಲೇಔಟ್ಗೆ ತೆರಳಿದ್ದರು. ಈ ವೇಳೆ ನಾಲ್ವರ ಗ್ಯಾಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿತ್ತು.
ಸದ್ಯ, ಹೊರರಾಜ್ಯಕ್ಕೆ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.