ಬೆಂಗಳೂರು, ಆ.28 (DaijiworldNews/HR): ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಯುತ್ತಿದ್ದು 20 ದಿನದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಮಾತನಾಡಿದ ಅವರು, ಆಗಸ್ಟ್ 30ಕ್ಕೆ ಪರೀಕ್ಷೆ ಮುಗಿಯಲಿದ್ದು, ಬಳಿಕ 20 ದಿನಗಳಲ್ಲಿ ರಿಸಲ್ಟ್ ಪ್ರಕಟಿಸಲಾಗುವುದು, ಅಕ್ಟೋಬರ್ ನಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುವುದು" ಎಂದರು.
ಇನ್ನು ರಾಜ್ಯದ 530 ಕೇಂದ್ರ ಸೇರಿ ಬೆಂಗಳೂರಿನ 86 ಕೇಂದ್ರಗಳಲ್ಲೂ ಪರೀಕ್ಷೆ ಉತ್ತಮವಾಗಿ ನಡೆಯುತ್ತಿದ್ದು, ಎಲ್ಲೂ ಯಾವುದೇ ಸಮಸ್ಯೆ ಇಲ್ಲ. ಕೊರೊನಾ ನಿಯಮಗಳಿಗೊಳಪಟ್ಟೇ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಗೆ 2,01,816 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳ ಪೈಕಿ 4 ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಬಂದಿದೆ. ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿ ಪರೀಕ್ಷೆ ಬರೆಸಲಾಗಿದೆ ಎಂದು ತಿಳಿಸಿದರು.