ಮೈಸೂರು ಆ 28 (DaijiworldNews/MS):ಕಳೆದ ಮಂಗಳವಾರ ನಡೆದ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ ಸೇರಿ ಐವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಪ್ರವೀಣ್ ಸೂದ್ ಮಾಹಿತಿ ನೀಡಿದರು.
ಮೈಸೂರಿನಲ್ಲಿ ಡಿಜಿ ಐಜಿಪಿ ಪ್ರವೀಣ್ ಸೂದ್ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಆರೋಪಿಗಳು ಎಲ್ಲಾ ತಿರುಪುರ ಮೂಲದವರು. ಆಗ್ಗಾಗ್ಗೆ ಕೆಲಸದ ಮೇರೆಗೆ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್, ಕಾರ್ಪೆಂಟರ್ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ ಒಬ್ಬ ಬಾಲಕ 17 ವರ್ಷದವನಿದ್ದಾನೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಇವರೆಲ್ಲರೂ ಕೆಲಸಕ್ಕೆ ಮೈಸೂರಿಗೆ ಬಂದಿದ್ದು, ವಾಪಸ್ಸು ಹೋಗುವಾಗ ಆ ಸ್ಥಳದಲ್ಲಿ ಕುಡಿದು ಪಾರ್ಟಿ ಮಾಡುತ್ತಿದ್ದರು ಎಂದು ಗೊತ್ತಾಗಿದೆ.
ಪ್ರಕರಣದಲ್ಲಿ ಸಂತ್ರಸ್ತೆಯಿಂದ ಯಾವ ಮಾಹಿತಿ ದೊರಕಿಲ್ಲ. ಆದರೂ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಈ ಆಕೆಯ ಸ್ನೇಹಿತ ಕೆಲವು ಮಾಹಿತಿ ನೀಡಿದರು. ಅದೂ ಅಪೂರ್ಣ. ಟೆಕ್ನಿಕಲ್, ಸೈಂಟಿಫಿಕ್ ಸಾಕ್ಷ್ಯ ಗಳ ಮೂಲಕ ಪ್ರಕರಣವನ್ನು ಭೇದಿಸಲಾಗುತ್ತದೆ ಎಂದರು.
ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ ಘೋಷಿಸುತ್ತೇವೆ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು