ಚಿಕ್ಕಬಳ್ಳಾಪುರ, ಆ.28 (DaijiworldNews/HR): ರಾಜ್ಯದಲ್ಲಿ ನೀಡಲಾಗುತ್ತಿರುವ ಲಸಿಕೆ ಸಂಖ್ಯೆ 4 ಕೋಟಿಗೆ ತಲುಪಿದ್ದು, ಇನ್ನು ಮುಂದೆ ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ನಡೆಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಿನಕ್ಕೆ 5 ಲಕ್ಷದಂತೆ ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಲಸಿಕೆ ನೀಡಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಪ್ರತಿ ದಿನ 5 ಲಕ್ಷಕ್ಕೂ ಹೆಚ್ಚು ಲಸಿಕೆ ನೀಡಲು ಕೋರಲಾಗಿದೆ" ಎಂದರು.
ಇನ್ನು ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಮಾಡಲಾಗುತ್ತಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಆ ದಿನ 15 ರಿಂದ 20 ಲಕ್ಷ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗುವುದು" ಎಂದಿದ್ದಾರೆ.