ಬೆಂಗಳೂರು, 29 (DaijiworldNews/HR): ಮೈಸೂರಿನ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪೊಲೀಸರು 85 ಗಂಟೆಗಳೊಳಗಾಗಿ ಭೇದಿಸಿ ಐವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದು, ಪೊಲೀಸರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಪೊಲೀಸರ ಕಾರ್ಯಾಚರಣೆಗೆ ರಾಜ್ಯದ ಜನತೆಯಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಪ್ರಕರಣವನ್ನು ಪತ್ತೆಹಚ್ಚಿದ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಬಹುಮಾನ ಘೋಷಿಸಲಾಗಿದೆ.
ಇನ್ನು ಸ್ಯಾಂಡಲ್ ವುಡ್ ಹಿರಿಯ ನಟ ಜಗ್ಗೇಶ್ ಅವರು ಕೂಡ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಭೇಧಿಸಿದ ಪೊಲೀಸರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡಿದ್ದು, ಈ ಕುರಿತು ಟ್ವೀಟ್ ಮಾಡಿ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದಾರೆ.