ಗದಗ, 29 (DaijiworldNews/HR): ಕರ್ನಾಟಕ ಮತ್ತು ಇಡೀ ದೇಶಕ್ಕೆ ಕಾಂಗ್ರೆಸ್ ಪಕ್ಷವು 60 ವರ್ಷಗಳಷ್ಟು ಕಾಲ ಶಾಪವಾಗಿತ್ತು ಎಂದು ಸಾರಿಗೆ ಸಚಿವ ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ಕರ್ನಾಟಕಕ್ಕೆ ಶಾಪ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ 60 ವರ್ಷ ರಾಜ್ಯಕ್ಕೆ ಅಷ್ಟೇ ಅಲ್ಲ ಇಡೀ ದೇಶಕ್ಕೆ ಶಾಪವಾಗಿತ್ತು. ಆ ಶಾಪದಿಂದ ಮುಕ್ತಿಯಾಗಿ ದೇಶದಲ್ಲಿ ನರೇಂದ್ರ ಮೋದಿಯವರ ಸರಕಾರ ಬಂದಿದೆ" ಎಂದರು.
ಇನ್ನು ಮೈಸೂರಿನಲ್ಲಿ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, "ಕಾಂಗ್ರೆಸ್ನವರು ತನಿಖೆಗೆ ಪ್ರತ್ಯೇಕ ಸಮಿತಿ ರಚನೆ ಮಾಡಿದ್ದು, ಮಹಿಳೆಯರಿಗೆ ರಕ್ಷಣೆ ಕೊಡುವಲ್ಲಿ ನಮ್ಮ ಸರಕಾರ ಬದ್ಧವಾಗಿದೆ" ಎಂದು ಹೇಳಿದ್ದಾರೆ.