ಬೆಂಗಳೂರು, 29 (DaijiworldNews/HR): ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಣಚಿನಕುಪ್ಪೆ ಬಳಿ ಚಲಿಸುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ರಸ್ತೆ ಮಧ್ಯೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರನ್ನು ರಸ್ತೆ ಪಕ್ಕ ತಂದು ನಿಲ್ಲಿಸಲಾಗಿದೆ. ಈ ವೇಳೆ ಏಕಾಏಕಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಸ್ಥಳಕ್ಕೆ ನೆಲಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.