ಮಹಾರಾಷ್ಟ್ರ, ಆ 29 (DaijiworldNews/PY): ಮುಂಬೈನ ಧಾರಾವಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು 14 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
"ಧಾರಾವಿಯ ಶಾಹು ನಗರದಲ್ಲಿ ಈ ಘಟನೆ ಸಂಭವಿಸಿದ್ದು, 14 ಮಂದಿ ಗಾಯಗೊಂಡಿದ್ದಾರೆ. 12 ಮಂದಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಿಲಿಂಡರ್ ಸ್ಪೋಟಕ್ಕೆ ಕಾರಣ ಏನೂ ಎಂದು ತಿಳಿದುಬಂದಿಲ್ಲ.