ಮೈಸೂರು, ಆ. 29 (DaijiworldNews/HR): ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಇಂದೇ ವೈದ್ಯಕೀಯ ಪರೀಕ್ಷೆ ನಡೆಯಲಿದ್ದು, ವೈದ್ಯಕೀಯ ಪರೀಕ್ಷೆಗಾಗಿ ವಿಶೇಷ ತಂಡ ಆಗಮಿಸಿದೆ. ಮೈಸೂರಿಗೆ ಆಗಮಿಸಿದ ತಜ್ಞರ ತಂಡ ಆರೋಪಿಗಳಿಂದ ಎಲ್ಲಾ ಸ್ಯಾಂಪಲ್ಗಳನ್ನು ಸಂಗ್ರಹಿಸುತ್ತಾರೆ.
ಸಾಂದರ್ಭಿಕ ಚಿತ್ರ
ಸಂತ್ರಸ್ತ ಯುವತಿಯು ಆರೋಪಿಗಳ ಬಂಧನ ಬಳಿಕವೂ ಘಟನೆಯ ಬಗ್ಗೆ ಹೇಳಿಕೆ ನೀಡುವುದಕ್ಕೆ ನಿರಾಕರಿಸುತ್ತಿದ್ದು, ಸಂತ್ರಸ್ತೆ ಜತೆಗಿದ್ದ ಸ್ನೇಹಿತನ ಹೇಳಿಕೆ ಆಧರಿಸಿ ಎಫ್ಐಆರ್ ದಾಖಲಾಗಿದೆ.
ಇನ್ನು ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಂದು ನಡೆದ ಘಟನೆ ಬಗ್ಗೆ ಪೊಲೀಸರ ಮುಂದೆ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಮೈಸೂರಿನ ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐದು ಜನರನ್ನು ಬಂಧಿಸಲಾಗಿದ್ದು, ಅತ್ಯಾಚಾರದಲ್ಲಿ 6 ಜನ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದ್ದು, ಪೊಲೀಸರ ತನಿಖೆ ವೇಳೆ ಇನ್ನೋರ್ವ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ.