ಅಯೋಧ್ಯೆ, ಆ. 29 (DaijiworldNews/HR): ಜಾಗತಿಕ ಭೂಪಟದಲ್ಲಿ ಅಯೋಧ್ಯೆಗೆ ವಿಶೇಷ ಸ್ಥಾನ ದೊರಕಿಸಿಕೊಡುವಲ್ಲಿ ರೈಲ್ವೆಯು ಪ್ರಮುಖ ಪಾತ್ರ ವಹಿಸಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ಈ ಕುರಿತು ಅಯೋಧ್ಯೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, "ವಿಶ್ವ ಭೂಪಟದಲ್ಲಿ ಅಯೋಧ್ಯೆಗೆ ಸ್ಥಾನ ಸಿಗುವಲ್ಲಿ ರೈಲ್ವೆ ಪ್ರಮುಖ ಪಾತ್ರವಹಿಸಿದ್ದು, ರೈಲ್ವೆ ಖಾತೆ ರಾಜ್ಯ ಸಚಿವ ದರ್ಶನಾ ಜಾರ್ದೋಷ್ ಅವರು ಅಯೋಧ್ಯೆಗೆ ಆಗಮಿಸಿರುವುದರಿಂದ ಪ್ರಗತಿಯಲ್ಲಿರುವ ರೈಲ್ವೆ ಯೋಜನೆಗಳು ವೇಗ ಪಡೆದುಕೊಳ್ಳಲು ಮತ್ತು ಅಯೋಧ್ಯೆಯ ಅಭಿವೃದ್ಧಿ ಕಾರ್ಯಗಳು ಮುಂದುವರಿಯಲು ನೆರವಾಗಲಿದೆ" ಎಂದರು.
ಇನ್ನು "ಐದು ಶತಮಾನಗಳ ಸುದೀರ್ಘ ಕಾಯುವಿಕೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಸಹಾನುಭೂತಿ ಮತ್ತು ಶ್ರಮದಿಂದಾಗಿ ಅಯೋಧ್ಯೆಯಲ್ಲಿ ಶ್ರೀರಾಮ ದೇವಾಲಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಉಪಸ್ಥಿತಿಯಲ್ಲಿ ಇಂದು ಹಲವು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗಿದೆ" ಎಂದು ಹೇಳಿದ್ದಾರೆ.