ಬೆಂಗಳೂರು, ಆ. 29 (DaijiworldNews/SM): ರಾಜ್ಯದಲ್ಲಿ ಕೊರೋನಾ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆ ಹೆಚ್ಚಾದಂತೆ ಲಸಿಕೆ ವಿತರಣೆ ಕೂಡ ವೇಗ ಪಡೆದುಕೊಂಡಿದೆ. ಆಗಸ್ಟ್ ತಿಂಗಳಲ್ಲಿ ರಾಝ್ಯದಲ್ಲಿ ಒಂದು ಕೋಟಿ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಇಲಾಖೆ ರಾಜ್ಯದಲ್ಲಿ ಯಶಸ್ವಿಯಾಗಿ ಆಗಸ್ಟ್ ತಿಂಗಳಲ್ಲಿ ಒಂದು ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. 3,74,291 ದೈನಂದಿನ ಸರಾಸರಿಯಾಗಿದೆ. ಆ ಮೂಲಕ ಆಗಸ್ಟ್ ತಿಂಗಳಲ್ಲಿ ಇಲ್ಲಿಯ ತನಕ 1,01,05,862 ಮಂದಿಗೆ ಲಸಿಕೆ ಪೂರೈಸಲಾಗಿದೆ ಎಂದು ತಿಳಿಸಿದೆ.