ಪಟ್ನಾ, ಆ 30 (DaijiworldNews/PY): "ಬಿಹಾರದ ಸಿಎಂ ನಿತೀಶ್ ಕುಮಾರ್ ಅವರಿಗೆ ದೇಶದ ಪ್ರಧಾನಿಯಾಗುವ ಎಲ್ಲಾ ಅರ್ಹತೆ ಇದೆ. ಆದರೆ, ಪ್ರಧಾನಿ ಹುದ್ದೆಯ ರೇಸ್ನಲ್ಲಿ ಅವರು ಇಲ್ಲ" ಎಂದು ಜೆಡಿಯು ಹೇಳಿದೆ.
ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ತಿಳಿಸಿದ ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಅವರು, "ನಿತೀಶ್ ಕುಮಾರ್ ಅವರಿಗೆ ಪ್ರಧಾನಿಯಾಗುವೆ ಎಲ್ಲಾ ಅರ್ಹತೆಗಳಿವೆ. ಆದರೆ, ನಿತೀಶ್ ಕುಮಾರ್ ಅವರು ಪ್ರಧಾನಿ ಹುದ್ದೆಯ ಅಭ್ಯರ್ಥಿಯಲ್ಲ. ನಮ್ಮದು ಎನ್ಡಿಎ ಮಿತ್ರಕೂಟ ಹಾಗೂ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹ ಪಕ್ಷ" ಎಂದು ತಿಳಿಸಿದ್ದಾರೆ.
"ನಾವು ಎನ್ಡಿಎ ಮೈತ್ರಿಕೂಟದಲ್ಲಿದ್ದು, ಅದನ್ನು ಬೆಂಬಲಿಸುತ್ತೇವೆ. ಎನ್ಡಿಎ ಮೈತ್ರಿಕೂಟವು ವಿವಿಧ ಸಮಸ್ಯೆಗಳನ್ನು ನಿವಾರಿಸಲು ಸಮನ್ವಯ ಸಮಿತಿಯನ್ನು ಸ್ಥಾಪಿಸುವುದನ್ನು ಪಕ್ಷ ಸ್ವಾಗತಿಸುತ್ತದೆ. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನ ಮಂತ್ರಿಯಾಗಿದ್ದ ವೇಳೆ ಸಮಸ್ವಯ ಸಮಿತಿ ರಚನೆಯಾದ ನಂತವೂ ಅನೇಕ ಕಾರ್ಯಗಳಿದ್ದವು" ಎಂದು ತ್ಯಾಗಿ ತಿಳಿಸಿದ್ದಾರೆ.
"ಜೆಡಿಯು 2022ರ ಉತ್ತರಪ್ರದೇಶ ಹಾಗೈ ಮಣಿಪುರ ವಿಧಾನಸಭೆ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ" ಎಂದಿದ್ದಾರೆ.
ತ್ಯಾಗಿ ಅವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿತೀಶ್ ಕುಮಾರ್ ಅವರು ನಿರಾಕರಿಸಿದ್ದಾರೆ.