ಬೆಂಗಳೂರು, ಆ. 30 (DaijiworldNews/HR): ಗೋವಿಂದಪುರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಬೆಳ್ಳಂಬೆಳಗ್ಗೆ ನಟಿ ಸೋನಿಯಾ ಮನೆ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.
ಗೋವಿಂದಪುರ ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಸೆಲೆಬ್ರಿಟಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್ ಶೆಟ್ಟಿ, ಸೋನಿಯಾ ಮನೆ ಮೇಲೆ ದಾಳಿ ನಡೆಸಲಾಗಿದೆ.
ಇನ್ನು ಡ್ರಗ್ಸ್ ಪೆಡ್ಲರ್ ಥಾಮಸ್ ನೀಡಿದ ಮಾಹಿತಿ ಮೇರೆಗೆ ಪದ್ಮನಾಭನಗರ, ರಾಜಾಜಿನಗರ, ಬೆನ್ಸೆನ್ ಟೌನ್ ನಲ್ಲಿರುವ ಮನೆಗಳ ಮೇಲೆ ದಾಳಿ ಮಾಡಲಾಗಿದ್ದು. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪೊಲೀಸರು ಸೆಲೆಬ್ರಿಟಿಗಳ ಮನೆಯಲ್ಲಿ ಹುಡುಕಾಟ ನಡೆಸುತ್ತಿದ್ದು, ದಾಳಿ ವೇಳೆ ಡ್ರಗ್ಸ್ ಪತ್ತೆಯಾಗಿರುವ ಶಂಕೆ ಇದೆ ಎನ್ನಲಾಗಿದೆ.