ಪೂಂಚ್, ಆ 30 (DaijiworldNews/PY): ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಉಗ್ರನನ್ನು ಭದ್ರತಾ ಪಡೆ ಸದೆಬಡಿದಿದೆ.
ಸಾಂದರ್ಭಿಕ ಚಿತ್ರ
"ಗಡಿ ನಿಯಂತ್ರಣ ರೇಖೆ ಬಳಿ ಅನುಮಾಸ್ಪದವಾಗಿ ಚಲಿಸುತ್ತಿದ್ದ ವ್ಯಕ್ತಿಯನ್ನು ಕಂಡ ಸೇನಾ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡಿದ್ದಾರೆ. ಈ ಸಂದರ್ಭ ಸೇನಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ" ಎಂದು ಸೇನಾ ಮೂಲಗಳು ಹೇಳಿವೆ.
ಮೃತ ಉಗ್ರನಿಂದ ಎಕೆ-47 ರೈಫಲ್ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.