ಚಂಡೀಗಡ, ಆ. 30 (DaijiworldNews/HR): ಪ್ರಸ್ತುತ ಅಫ್ಗಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ರಾಷ್ಟ್ರೀಯ ಭದ್ರತೆಯ ದೃಷ್ಟಿಕೋನದಿಂದ ಹೊಸ ಪ್ರಶ್ನೆಯಾಗಿದ್ದು, ಇದರಿಂದ ಉಂಟಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ಸಮರ್ಥವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಈ ಕುರಿತು ಪಂಜಾಬ್ ವಿಶ್ವವಿದ್ಯಾಲಯ ರಾಷ್ಟ್ರೀಯ ಭದ್ರತೆ ಕುರಿತು ಸೋಮವಾರ ಆಯೋಜಿಸಿದ್ದ ಮೂರನೇ ಬಲರಾಮ್ಜಿ ದಾಸ್ ಟಂಡನ್ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಅಫ್ಗಾನಿಸ್ತಾನದಲ್ಲಿನ ಈ ಬೆಳವಣಿಗೆಗಳ ಲಾಭವನ್ನು ಬಳಸಿಕೊಂಡು ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಲು ಯಾವುದೇ ದೇಶವಿರೋಧಿ ಶಕ್ತಿಗೆ ಅವಕಾಶ ನೀಡಬಾರದು" ಎಂದರು.
ಇನ್ನು ಪ್ರಸ್ತುತ ಅಫ್ಗಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಭಾರತೀಯರ ರಕ್ಷಣೆ ಜೊತೆಗೆ, ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದಲೂ ಹೊಸ ಸವಾಲುಗಳನ್ನು ಹುಟ್ಟು ಹಾಕುತ್ತಿದೆ ಎಂದು ಸಿಂಗ್ ತಿಳಿಸಿದ್ದಾರೆ.