ಬೆಂಗಳೂರು, ಆ. 30 (DaijiworldNews/SM): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಭೆ ನಡೆದಿದ್ದು, ಗಣೇಶ ಹಬ್ಬ ಆಚರಣೆ ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ.
ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲಾಗುವುದು. ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಕೂರಿಸುವ ಸಂಬಂಧ ಮಾಹಿತಿ ಸಂಗ್ರಹಿಸಲಾಗಿದೆ. ಅವರೊಂದಿಗೆ ಚರ್ಚಿಸಿ ನಂತರ ಅನುಮತಿ ನೀಡಲಾಗುವುದು ಎಂದು ತಿಳಿದು ಬಂದಿದೆ.
ಸದ್ಯ ಗಣೇಶ ಹಬ್ಬ ಆಚರಣೆ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸೆ.5ರಂದು ಮತ್ತೊಂದು ಸಭೆ ನಡೆಸಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದು, ಮುಂದೆ ಈ ಸಂಬಂಧ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು.