ಮೈಸೂರು, ಆ.31 (DaijiworldNews/HR): ಮೈಸೂರಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐದು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದು, ಈ ಮೂಲಕ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.
ಇನ್ನು ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಸಮೀಪ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದು, ಇದೀಗ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.