ಮೈಸೂರು, ಆ.31 (DaijiworldNews/HR): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಉತ್ತಮ ಆಡಳಿತ ಮಾಡುತ್ತಿದ್ದು, ರಾಜ್ಯಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿಯು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೊಡ್ಡ ನಾಯಕ. ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಘಟನೆ ಬಗ್ಗೆ ಅನುಭವವಿದೆ. ಅವರ ಅವರ ಅನುಭವನ್ನು ಪಕ್ಷ ಸಮಘಟನಗೆ ಬಳಸಿಕೊಳ್ಳುತ್ತೇವೆ" ಎಂದರು.
ಇನ್ನು "ಸಚಿವ ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ. ಖಾತೆ ಹಂಚಿಕೆಯಲ್ಲಿ ಬೊಮ್ಮಾಯಿಗೆ ಅಧಿಕಾರವಿದೆ. ಖಾತೆ ಹಂಚಿಕೆಯಲ್ಲಿ ನಮ್ಮ ಪಾತ್ರ ಇಲ್ಲ. ಎಲ್ಲ ಸಚಿವರು ಉತ್ತಮ ಕೆಲಸ ಮಾಡುತ್ತಿದ್ದಾರೆ" ಎಂದು ಹೇಳಿದ್ದಾರೆ.