ನವದೆಹಲಿ, ಆ.31 (DaijiworldNews/HR): "ಕೇಂದ್ರ ಸರ್ಕಾರ ಜಲಿಯಾನ್ವಾಲಾ ಬಾಗ್ ಸ್ಮಾರಕವನ್ನು ಪುನರುಜ್ಜೀವನಗೊಳಿಸಿರುವುದು ಹುತಾತ್ಮರಿಗೆ ಮಾಡಿದ ಅವಮಾನ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ನವೀಕೃತ ಜಲಿಯನ್ ವಾಲಾಬಾಗ್ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದ ಕುರಿತು ಟ್ವೀಟ್ ಮಾಡಿರುವ ಅವರು, "ಹುತಾತ್ಮ ಎಂಬುದರ ಅರ್ಥ ತಿಳಿಯದ ವ್ಯಕ್ತಿ ಮಾತ್ರ ಹೀಗೆ ಹುತಾತ್ಮರಿಗೆ ಅವಮಾನ ಮಾಡಲು ಸಾಧ್ಯ ಎಂದಿರುವ ಅವರು ಸ್ಮಾರಕದ ನವೀಕರಣದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ವರದಿಯನ್ನು ಟ್ಯಾಗ್ ಮಾಡಿದ್ದಾರೆ.
ಇನ್ನು "ನಾನು ಹುತಾತ್ಮರ ಮಗ. ಹುತಾತ್ಮರಿಗೆ ಮಾಡಿರುವ ಅವಮಾನವನ್ನು ನಾನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇಂಥ ಕ್ರೌರ್ಯದ ವಿರುದ್ಧ ನಾವೆಲ್ಲರೂ ಹೋರಾಡುತ್ತೇವೆ" ಎಂದಿದ್ದಾರೆ.