ಮಂಡ್ಯ, ಸೆ 01(DaijiworldNews/MS): ಚುನಾವಣೆಯ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಸಂಸದೆ ಸುಮಲತಾ ಅಂಬರೀಶ್, ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಮಂಡ್ಯ-ಮದ್ದೂರು ನಡುವಿನ ಹನಕೆರೆ ಗ್ರಾಮದಲ್ಲಿ ಸುಮಲತಾ ಸ್ವಂತ ಮನೆ ನಿರ್ಮಾಣಕ್ಕೆ ಮುಂದಾಗಿದ್ದು, ತನ್ನ ಆಪ್ತ ವಲಯದಲ್ಲಿ ಗುರುತಿಸಿಕೊಂಡರುವ ಹನಕೆರೆ ಶಶಿ ಎಂಬುವರಿಂದ ಸದರಿ ಜಾಗವನ್ನು ಖರೀದಿ ಮಾಡಿದ್ದಾರೆ. ಮುಕ್ಕಾಲು ಎಕರೆ ಜಾಗದಲ್ಲಿ ಮನೆ ನಿರ್ಮಿಸಲು ಗುದ್ದಲಿ ಪೂಜೆ ನೆರವೇರಲಿದ್ದು, 6-7 ತಿಂಗಳಲ್ಲಿ ಮನೆ ನಿರ್ಮಿಸಿ ಅಲ್ಲಿಂದಲೇ ಮುಂದಿನ ಚುನಾವಣೆಗೆ ತಯಾರಿ ಮಾಡಲಿದ್ದಾರೆ.
ಸುಮಲತಾ ಮನೆಗಾಗಿ ಗುದ್ದಲಿ ಪೂಜೆ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಶುರುವಾಗಿದೆ. ಸ್ವಂತ ಮನೆ ನಿರ್ಮಾಣ ಹಿಂದಿದೆಯಾ ಪುತ್ರನ ರಾಜಕೀಯ ಭವಿಷ್ಯ ಎಂಬ ಪ್ರಶ್ನೆ ಚರ್ಚೆಗೆ ಗ್ರಾಸವಾಗಿದೆ. ಮುಂದಿನ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಷ್ ಅವರನ್ನು ಕಣಕ್ಕಿಸಲು ಸುಮಲತಾ ಯೋಜನೆ ರೂಪಿಸುತ್ತಿದ್ದಾರೆ ಎಂಬ ಅನುಮಾನ ರಾಜಕೀಯ ವಲಯದಲ್ಲಿ ಮೂಡತೊಡಗಿದೆ.