ನವದೆಹಲಿ, ಸೆ. 01 (DaijiworldNews/SM): ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ಕೇಂದ್ರ ಸರಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಎಲ್ ಪಿಜಿ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ ಸರಕಾರ ಆಡಳಿತಕ್ಕೆ ಬಂದ ಬಳಿಕ ಬರೋಬ್ಬರಿ ಬೆಲೆ ಏರಿಕೆ ಮೂಲಕವೇ 23 ಲಕ್ಷ ಕೋಟಿ ರೂಪಾಯಿ ಸರಕಾರದ ಬೊಕ್ಕಸಕ್ಕೆ ಸೇರಿದೆ ಎಂದಿದ್ದಾರೆ.
ರೈತರು, ಸಂಬಳದ ವರ್ಗ ಮತ್ತು ಕಾರ್ಮಿಕರು ಡಿಮಾನಿಟೈಸ್ ಆಗುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿಯ ಕೆಲವು ಕೈಗಾರಿಕೋದ್ಯಮಿ ಸ್ನೇಹಿತರು ಹಣಗಳಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಜಿಡಿಪಿ ಹೆಚ್ಚಳ ಎಂದರೆ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಎಂಬಂತಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಇನ್ನು ನಿರಂತರ ಬೆಲೆ ಏರಿಕೆಯಿಂದ ಸಂಗ್ರಹವಾಗುವ ಹಣ ಎಲ್ಲಿಗೆ ಹೋಗುತ್ತಿದೆ ಎಂಬುವುದನ್ನು ಜನರು ಕೇಂದ್ರ ಸರಕಾರವನ್ನು ಪ್ರಶ್ನಿಸಬೇಕೆಂದು ರಾಹುಲ್ ಗಾಂಧಿ ಹೇಳಿದ್ದಾರೆ.