ಬೆಂಗಳೂರು, ಸೆ. 01 (DaijiworldNews/SM): ರಾಜ್ಯದಲ್ಲಿ ಸಾಕಷ್ಟು ಚರ್ಚೆಗ್ ಗ್ರಾಸವಾಗಿದ್ದ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಕಳೆದ ವರ್ಷದ ನಿಯಮಗಳೇ ಅನ್ವಯವಾಗಲಿದೆ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಗಣೇಶೋತ್ಸವ ಆಚರಣೆ ಕುರಿತು ಈಗಾಗಲೇ ಹೇಳಿದಂತೆ ಸೆ. 5 ರಂದು ತಜ್ಞರು ವರದಿ ಸಲ್ಲಿಸುತ್ತಾರೆ. ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ವಿವಿಧ ರೀತಿಯ ಆಚರಣೆಗಳಿವೆ. ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ಅಧ್ಯಯನ ನಡೆಸಲು ಕಾಲಾವಕಾಶ ಕೋರಿದೆ. ಬಳಿಕ ಅವರು ಸಲ್ಲಿಸಿದ ವರದಿಯ ಆಧಾರದ ಮೇಲೆ ಮುಂದಿನ ನಿರ್ಧಾರ ಪ್ರಕಟಿಸಲಾಗುವುದೆಂದು ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ, ಹಿಂದಿನ ವರ್ಷ ಯಾವ ರೀತಿ ನಿಯಮನುಸಾರ ಗಣೇಶೋತ್ಸವ ಆಚರಿಸಲಾಗಿತ್ತು ಅದೇ ರೀತಿ ಈ ವರ್ಷವು ಕಟ್ಟುನಿಟ್ಟಿನ ಕ್ರಮಗಳ ಮೂಲಕ ಆಚರಿಸಲು ಅನುಮತಿ ನೀಡಲಾಗುತ್ತದೆ ಎಂದಿದ್ದಾರೆ.