ಬೆಂಗಳೂರು, ಸೆ 2 (DaijiworldNews/MS): ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ ನಿರ್ವಹಣೆ ಮತ್ತು ಅಭಿವೃದ್ಧಿ ಹೊಣೆಯನ್ನು ಅದಾನಿ ಎಂಟರ್ಪ್ರೈಸಸ್ ಲಿ. ಗೆಹಸ್ತಾಂತರಿಸಲು ಕೇಂದ್ರ ಸರಕಾರ ಕೈಗೊಂಡ ನಿರ್ಣಯ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಈ ಕುರಿತು ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.