ನವದೆಹಲಿ, ಸ. 02 (DaijiworldNews/HR): ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಪರ ವಕೀಲ ಆನಂದ್ ಡಾಗಾ ಅವರನ್ನು ಸಿಬಿಐ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.
ಅನಿಲ್ ದೇಶಮುಖ್ ಅವರ ವಿರುದ್ಧ ಬಾಂಬೆ ಹೈಕೋರ್ಟ್ನ ನಿರ್ದೇಶನದಂತೆ ಕೈಗೊಂಡಿದ್ದ ತನಿಖೆಯನ್ನು ಬುಡಮೇಲು ಮಾಡಲು ಯತ್ನಿಸಿದ ಆರೋಪದ ಮೇಲೆ ಆನಂದ್ ಅವರನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.
ಆನಂದ್ ಅವರನ್ನು ಮುಂಬೈನಲ್ಲಿ ಬಂಧಿಸಿ ನವದೆಹಲಿಯಲ್ಲಿರುವ ಸಿಬಿಐ ಕಚೇರಿಗೆ ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಡಾಗಾ ಅವರಿಂದ ಲಂಚ ಪಡೆದ ಆರೋಪದ ಮೇಲೆ ಸಿಬಿಐ ಸಬ್ಇನ್ಸ್ಪೆಕ್ಟರ್ ಅಭಿಷೇಕ್ ತಿವಾರಿ ಎಂಬುವವನ್ನು ಬುಧವಾರ ರಾತ್ರಿ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನೂ ಕೋರ್ಟ್ಗೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.