ನವದೆಹಲಿ, ಸ. 02 (DaijiworldNews/HR): ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರೆ ಅವರಿಗೆ ಅಸಾಧಾರಣ ಸ್ಥಾನಮಾನ ಸಿಗುತ್ತದೆ ಎಂಬ ಊಹಾಪೋಹಗಳಿಂದ ಅವರನ್ನು ಪಕ್ಷಕ್ಕೆ ಸೇರಿಸುವ ವಿಷಯದಲ್ಲಿ ಕಾಂಗ್ರೆಸ್ ವಿಭಜನೆಯಾಗಿದೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಂತಿಮ ಕರೆ ತೆಗೆದುಕೊಳ್ಳಲಿದ್ದಾರೆ.
ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಸೇರ್ಪಡೆ ಕುರಿತ ಅಂತಿಮ ನಿರ್ಧಾರವು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರು ತೆಗೆದುಕೊಳ್ಳಲಿದ್ದು, ಕಳೆದ ವರ್ಷ ಪಕ್ಷದಲ್ಲಿ ಬದಲಾವಣೆ ಬಯಸಿದ್ದ 23 ನಾಯಕರ ಗುಂಪು, ಪ್ರಶಾಂತ್ ಕಿಶೋರ್ ಕಾಂಗ್ರೆಸ್ಗೆ ಸೇರ್ಪಡೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿತ್ತು.
ಇನ್ನು ಇತ್ತೀಚಿಗೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಪ್ರಶಾಂತ್ ಕಿಶೋರ್, ಚುನಾವಣಾ ನಿರ್ವಹಣೆಯ ಪ್ರಮುಖ ಜವಾಬ್ದಾರಿ ವಹಿಸಿಕೊಳ್ಳುವ ಕುರಿತಾಗಿ ಚರ್ಚೆ ನಡೆಸಿದ್ದು, 2014ರ ಲೋಕಸಭಾ ಚುನಾಣೆಯಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ನೆರವಾಗಿದ್ದ ಪ್ರಶಾಂತ್, ಬಳಿಕ ಜೆಡಿಯು ಪಕ್ಷವನ್ನು ಸೇರಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಸೋನಿಯಾ ಗಾಂಧಿ ತೀರ್ಮಾನ ಅಂತಿಮವಾಗಲಿದೆ.