ನವದೆಹಲಿ, ಸೆ. 03 (DaijiworldNews/PY): "ಹಬ್ಬಗಳ ಸಮಯದಲ್ಲಿ ಅನಿವಾರ್ಯ ಎಂದೆನಿಸಿದ್ದಲ್ಲಿ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡವರು ಮಾತ್ರವೇ ಗುಂಪಿನಲ್ಲಿ ಪಾಲ್ಗೊಳ್ಳಬಹುದು" ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.
"ಆಗಸ್ಟ್ ತಿಂಗಳಿನಲ್ಲಿ 18.38 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ. ಆಗಸ್ಟ್ ತಿಂಗಳಿನಲ್ಲಿ ಸರಾಸರಿ 59.29 ಲಕ್ಷ ಡೋಸ್ ಲಸಿಕೆ ಹಾಕಲಾಗಿದೆ. ಸೆಪ್ಟೆಂಬರ್ನಲ್ಲಿ ಪ್ರತಿದಿನ 70-75 ಲಕ್ಷ ಡೋಸ್ ಲಸಿಕೆ ಹಾಕುವ ಭರವಸೆಯಲ್ಲಿ ಸರ್ಕಾರ ಇದೆ" ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
"ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಲಸಿಕೆ ನೀಡಲಾಗಿದೆ" ಎಂದು ನೀತಿ ಆಯೋಗದ ಸದಸ್ಯ ವಿ ಕೆ ಪೌಲ್ ಹೇಳಿದ್ದಾರೆ.
ಈ ಬಗ್ಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪ್ರತಿಕ್ರಿಯೆ ನೀಡಿದ್ದು, "ಆರ್ಥಿಕತೆ, ಜನರು ಹಾಗೂ ಸಾಮಾಜಿಕ ವ್ಯವಸ್ಥೆಯನ್ನು ಸುರಕ್ಷಿತವಾಗಿರಿಸುವ ಗುರಿಯೊಂದಿಗೆ ಕಾರ್ಯ ನಿರ್ವಹಿಸುತ್ತಿದೆ" ಎಂದಿದ್ದಾರೆ.