ಕಣ್ಣೂರ್, ಸ.03 (DaijiworldNews/HR): ಕೇಂದ್ರ ಸರ್ಕಾರವು ಜನಸಾಮಾನ್ಯರನ್ನು ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಕುರಿತು ಕಣ್ಣೂರ್ ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, "ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಾಗಿದ್ದರೂ ಭಾರತದಲ್ಲಿ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಂಧನ ಬೆಲೆಯೇರಿಕೆಯಿಂದ ಕೇಂದ್ರ ಸರ್ಕಾರ 25 ಲಕ್ಷ ಕೋಟಿ ಹೆಚ್ಚುವರಿಯಾಗಿ ಸಂಗ್ರಹಿಸಿದ್ದು, ಈ ಹಣ ಏನಾಯಿತು ಎಂಬುದನ್ನು ಸರ್ಕಾರ ಜನರ ಮುಂದೆ ಬಹಿರಂಗಪಡಿಸಬೇಕು" ಎಂದು ಒತ್ತಾಯಿಸಿದ್ದಾರೆ.
ಇನ್ನು "ಕೇಂದ್ರ ಸರ್ಕಾರವು ತೈಲ ಬೆಲೆಯೇರಿಕೆ ಮಾಡಿ ಸಂಗ್ರಹಿಸಿದ ಹೆಚ್ಚುವರಿ ಹಣವನ್ನು ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿಲ್ಲ. ಬಿಜೆಪಿ ಸರ್ಕಾರವು ಜನಸಾಮಾನ್ಯರನ್ನು ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.