ಮೈಸೂರು, ಸ.03 (DaijiworldNews/HR): ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ದ ಶಾಸಕ ಸಾ.ರಾ.ಮಹೇಶ್ ಮತ್ತೊಂದು ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲೆಗೆ ಬಂದ ಎಂಟು ಕೋಟಿ ಎಸ್ಎಸ್ಸಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
"ಪ್ಲಾಸ್ಟಿಕ್ ಮುಕ್ತ ಮೈಸೂರು ಮಾಡುವ ನೆಪದಲ್ಲಿ ಹಣ ಲೂಟಿ ಮಾಡಲಾಗಿದ್ದು, ಬಟ್ಟೆ ಬ್ಯಾಗ್ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ಮಾಡಿದ್ದು, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಅನುಮತಿ ಪಡೆಯದೆ ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ" ಎಂದಿದ್ದಾರೆ.
ಇನ್ನು "ಉಪವಿಭಾಗಾಧಿಕಾರಿಯೊಬ್ಬರ ಪತಿಯೊಬ್ಬ ಬ್ಯಾಗ್ ಸರಬರಾಜು ಗುತ್ತಿಗೆದಾರರಾಗಿದ್ದು, ಅವರಿಂದ ಕಿಕ್ಬ್ಯಾಕ್ ಪಡೆದು ಅವ್ಯವಹಾರ ಮಾಡಿದ್ದಾರೆ" ಎಂದು ಆರೋಪಿಸಿದ್ದಾರೆ.