ಬೆಂಗಳೂರು, ಸ.03 (DaijiworldNews/HR): ಸೆಪ್ಟೆಂಬರ್ 20 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿದ್ದು, ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು ಯಾವುದೇ ಗೊಂದಲ ಹಾಗೂ ಸಮಸ್ಯೆ ಇಲ್ಲದೆ ಪೂರ್ಣಗೊಳಿಸಲಾಗುವುದು" ಎಂದರು.
ಇನ್ನು ಸಕಾಲಕ್ಕೆ ಫಲಿತಾಂಶ ನೀಡುವುದೂ ಸೇರಿ ನಿಗದಿತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್ ಮುಗಿಸಲಾಗುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ಹಳಿತಪ್ಪಲು ಬಿಡುವುದಿಲ್ಲ" ಎಂದು ತಿಳಿಸಿದ್ದಾರೆ.