ಮೈಸೂರು, ಸೆ. 03 (DaijiworldNews/SM): ಸಾಂಸ್ಕೃತಿಕ ನಗರಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆಘಾತದಿಂದ ರಾಜ್ಯದ ಜನರು ಇನ್ನೂ ಹೊರಬಂದಿಲ್ಲ. ಇದರ ಬೆನ್ನಲ್ಲೇ ಮತ್ತೊಂದು ಅತ್ಯಾಚಾರ ಯತ್ನ ಪ್ರಕರಣ ಅದೇ ಜಿಲ್ಲೆಯಲ್ಲಿ ನಡೆದಿದೆ.
ಮೈಸೂರಿನಲ್ಲಿ ಇನ್ನೋರ್ವ ವಿದ್ಯಾರ್ಥಿನಿ ಮೇಲೆ ಪಾಪಿಗಳು ನೀಚ ಕೃತ್ಯ ಎಸಗಲು ಯತ್ನಿಸಿದ್ದಾರೆ. ಮೈಸೂರಿನ ಆರ್.ಎಸ್.ನಾಯ್ಡು ನಗರದ ಹೋಲಿ ಕ್ರಾಸ್ ಸ್ಡಡಿ ಹೌಸ್ನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಹಲ್ಲೆ ಮತ್ತು ಅತ್ಯಾಚಾರ ಯತ್ನ ನಡೆದಿದೆ ಎಂಬ ಬಗ್ಗೆ ವರದಿಯಾಗಿದೆ. ಸದ್ಯ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಪ್ರಕರಣದ ಬಗ್ಗೆ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಘಟನೆ ನಡೆದ ಎರಡು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ವಿದ್ಯಾರ್ಥಿನಿ ಒಬ್ಬಳೇ ಇರುವ ಬಗ್ಗೆ ಮಾಹಿತಿ ಪಡೆದ ದುಷ್ಕರ್ಮಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.