ಬೆಂಗಳೂರು, ಸೆ. 04 (DaijiworldNews/PY): "1-5ನೇ ತರಗತಿ ತೆರೆಯಲು ಪ್ರಸ್ತುತ ಚಿಂತನೆ ಇಲ್ಲ. ಸದ್ಯಕ್ಕೆ ಪ್ರಾಥಮಿಕ ಶಾಲೆ ಆರಂಭ ಇಲ್ಲ" ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸದ್ಯ 6-8ನೇ ತರಗತಿಗಳನ್ನು ಟ್ರಯಲ್ ಆಗಿ ಆರಂಭಿಸುತ್ತಿದ್ದೇವೆ. ಪ್ರಾಥಮಿಕ ಶಾಲೆಗಳಾದ 1-5ನೇ ತರಗತಿಗಳನ್ನು ತೆರಯುವ ಚಿಂತನೆ ಇಲ್ಲ. ಸದ್ಯಕ್ಕೆ ಪ್ರಾಥಮಿಕ ಶಾಲೆ ತೆರೆಯುವುದು ಬೇಡ ಎಂದು ನಿರ್ಧರಿಸಲಾಗಿದೆ" ಎಂದಿದ್ದಾರೆ.
"ರಾಜ್ಯದಲ್ಲಿ 1-5ನೇ ತರಗತಿಯವರೆಗೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸದ್ಯ, ಅಂತಹ ಯೋಚನೆಗಳಿಲ್ಲ" ಎಂದು ತಿಳಿಸಿದ್ದಾರೆ.
"ಸೆ.6ರಿಂದ 6-8ನೇ ತರಗತಿವರೆಗೆ ಶಾಲೆ ಆರಂಭಕ್ಕೆ ನಿಯಮಾನುಸಾರ ಅವಕಾಶ ಕಲ್ಪಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೊರೊನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಶಾಲೆಗಳನ್ನು ತೆರೆಯಲಾಗುವುದು" ಎಂದು ಹೇಳಿದ್ದಾರೆ.