ಬೆಂಗಳೂರು, ಸೆ 04 (DaijiworldNews/MS): ಬೈಕ್, ಟಿವಿ, ಫ್ರಿಡ್ಜ್ ಇದ್ದವರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗುವುದಿಲ್ಲ . ಈ ಬಗ್ಗೆ ಯಾವುದೇ ಆದೇಶ ಹೊರಡಿಸಲಾಗಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತೆ ಶಮ್ಲಾ ಇಕ್ಬಾಲ್ ಸ್ಪಷ್ಟಪಡಿಸಿದ್ದಾರೆ.
ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್, ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ಎನ್ನುವ ಸುದ್ದಿ ಪ್ರಸಾರವಾಗಿತ್ತು. ಆದರೆ ಈ ಬಗ್ಗೆ ಸ್ಪಷ್ಟಪಡಿಸಿರುವ ಇಲಾಖೆ ಆಯುಕ್ತೆ ಇಂತಹ ವದಂತಿಗಳನ್ನು ಜನ ನಂಬುವುದು ಬೇಡ. ಬಿಪಿಎಲ್ ಕಾರ್ಡ್ ರದ್ದು ಮಾಡುವ ಸುದ್ದಿಗಳು ಆಧಾರ ರಹಿತ. ಅಂತಹ ಯಾವುದೇ ಆದೇಶ ಇಲಾಖೆಯಿಂದ ಹೊರಡಿಸಿಲ್ಲ. ಬೈಕ್, ಟಿವಿ, ಫ್ರಿಡ್ಜ್ ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ಬಗ್ಗೆ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ 3 ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯ ₹1.28 ಲಕ್ಷವಿದ್ದರೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಆದರೆ ಬೈಕ್, ಫ್ರಿಡ್ಜ್, ಟಿವಿ ಇದ್ದರೂ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು.