ಬೆಂಗಳೂರು, ಸ.04 (DaijiworldNews/HR): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ ಎಂದು ನಟ ಚೇತನ್ ವಿವಾದಿತ ಹೇಳಿಕೆಯನ್ನು ನೀಡಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ನಟ ಚೇತನ್ ಮಾಡಿರುವ ವಿವಾದಿತ ಟ್ವೀಟ್ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ನಡೆದಿದೆ.
ಕರ್ನಾಟಕದ ಪ್ರಬಲ ಮತ್ತು ವಾದನೀಯವಾಗಿ ಕಾಂಗ್ರೆಸ್ಸಿನ ಅತ್ಯುತ್ತಮ ನಾಯಕರಾದ ಸಿದ್ದರಾಮಯ್ಯನವರು, ಮೂಲಭೂತವಾಗಿ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು. ದೇಶಕ್ಕೆ ಮತ್ತು ರಾಜ್ಯಕ್ಕೆ ಇಂತಹ ನಾಯಕರ ಅಗತ್ಯ ಇಲ್ಲ. ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ 'ಜಾತಿ ವಿರೋಧಿ' ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯನವರ ಸೇವೆ 'ಹುಟ್ಟಿದ ಜಾತಿಗೆ' ಮಾತ್ರ ಸೀಮಿತವಾಗಿದ್ದು, ಇತರೆ ಬಹುಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತಾಡುತ್ತಾರೆ ಎಂದು ನಟ ಚೇತನ್ ಟ್ವೀಟ್ ಮಾಡಿ ಆರೋಪಿಸಿದ್ದಾರೆ.
ಇನ್ನು ನಟ ಚೇತನ್ ಅವರ ಈ ಟ್ವೀಟ್ ಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಆಕ್ಷೇಪ ವ್ಯಕ್ತಪಡಿಸಿದ್ದಾರೆ.