ಬೆಂಗಳೂರು, ಸ.04 (DaijiworldNews/HR): ರಾಜ್ಯದಲ್ಲಿ ಇಂದು ಹೊಸದಾಗಿ 983 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದು 21 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಸಾಂಧರ್ಭಿಕ ಚಿತ್ರ
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಇಂದು 1620 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ 17,746 ಸಕ್ರಿಯ ಪ್ರಕರಣಗಳು ಇವೆ. ಇವತ್ತು ಒಂದೇ ದಿನ 1,59,248 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.61 ರಷ್ಟು ಇದೆ.
ಇನ್ನು ಬೆಂಗಳೂರಿನಲ್ಲಿ 289 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 618 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 7382 ಸಕ್ರಿಯ ಪ್ರಕರಣಗಳು ಇವೆ.