ನವದೆಹಲಿ, ಸೆ. 05 (DaijiworldNews/PY): ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಕರ ದಿನದ ಅಂಗವಾಗಿ ದೇಶದ ಇಡೀ ಶಿಕ್ಷಕ ಸಮುದಾಯಕ್ಕೆ ಶುಭಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಿಕ್ಷಕರ ದಿನದಂದು ಯುವ ಮನಸ್ಸುಗಳನ್ನು ಪೋಷಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಬೋಧನಾ ವೃಂದಕ್ಕೆ ನನ್ನು ಶುಭಾಶಯಗಳು. ಕೊರೊನಾದ ಸಂಕಷ್ಟ ಸಂದರ್ಭ ಮಕ್ಕಳು ಶಿಕ್ಷಣ ವಂಚಿತರಾಗದಂತೆ ನೋಡಿಕೊಂಡು ಅವರಿಗೆ ಶಿಕ್ಷಣವನ್ನು ಧಾರೆಯೆರೆದ ಶಿಕ್ಷಕರ ಕಾರ್ಯವನ್ನು ಶ್ಲಾಘಿಸಿದ್ದಾರೆ.
"ದೇಶದ ಯುವ ಜನತೆಯ ವ್ಯಕ್ತಿತ್ವ ರೂಪಿಸುವಲ್ಲಿ ಹಾಗೂ ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು" ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿಳಿಸಿದ್ದಾರೆ.
ಸೆಪ್ಟೆಂಬರ್ 5ರಂದು ಮಾಜಿ ರಾಷ್ಟ್ರಪತಿ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮಜಯಂತಿಯಾಗಿದ್ದು, ಇದನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ.