ಬೆಂಗಳೂರು, ಸ.05 (DaijiworldNews/HR): "ಕರ್ನಾಟಕದಲ್ಲಿ ಸದ್ಯಕ್ಕೆ 1 ರಿಂದ 5 ನೇ ತರಗತಿ ಭೌತಿಕ ತರಗತಿಗಳನ್ನು ಪುನರಾರಂಭಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕರ್ನಾಟಕದಲ್ಲಿ 1 ರಿಂದ 5 ನೇ ತರಗತಿ ಆರಂಭದ ಬಗ್ಗೆ ನಾವು ಇನ್ನೂ ಯಾವುದೇ ಚರ್ಚೆ ಮಾಡಿಲ್ಲ. 6-8 ನೇ ತರಗತಿಗಳು ಹೇಗೆ ನಡೆಯುತ್ತದೆ ಎಂಬುದರ ಆಧಾರದ ಮೇಲೆ 1 ರಿಂದ 5 ನೇ ತರಗತಿ ಆರಂಭದ ಬಗ್ಗೆ ನಿರ್ಧರಿಸಲಾಗುವುದು" ಎಂದರು.
ಇನ್ನು ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಲಾದ ಇತ್ತೀಚಿನ ನಿದರ್ಶನಗಳ ಹಿನ್ನೆಲೆಯಲ್ಲಿ, ವಿಶೇಷವಾಗಿ ಇತ್ತೀಚಿನ ಬಿಜೆಪಿ ಜನ ಆಶೀರ್ವಾದ್ ಯಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕ ಸಭೆಗಳು ಮತ್ತು ದೊಡ್ಡ ಪ್ರಮಾಣದ ಸಭೆಗಳಿಗೆ ಸರ್ಕಾರ ಮಾರ್ಗಸೂಚಿಗಳನ್ನು ಮರುಬಿಡುಗಡೆ ಮಾಡುತ್ತದೆ ಎಂದು ಹೇಳಿದರು.