ಮೈಸೂರು, ಸ.05 (DaijiworldNews/HR): ಮೈಸೂರು ಭೂ ಅಕ್ರಮ ಮರುತನಿಖೆಯನ್ನು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆದ ಬಳಿಕವು ಮತ್ತೊಂದು ತನಿಖೆ ಏಕೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ಭೂ ಅಕ್ರಮ ಮರುತನಿಖೆಗೆ ಭೂ ದಾಖಲೆಗಳ ಇಲಾಖೆ ಆಯುಕ್ತ ಮನೀಶ್ ಮೌದ್ಗಿಲ್ ಆದೇಶ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, "ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆದ ಬಳಿಕವೂ ಮತ್ತೊಂದು ತನಿಖೆ ಏಕೆ? ಐಎಎಸ್ ಅಧಿಕಾರಿಗಳು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅಧಿಕಾರಿಗಳು ಆರೋಪ ಮಾಡಿದರೆ ರಾಜಕಾರಣಿಗಳು ಭ್ರಷ್ಟರು. ಅಧಿಕಾರಿಗಳ ಮೇಲೆ ಆರೋಪ ಮಾಡಿದರೆ ಅವರು ಪ್ರಾಮಾಣಿಕರಾ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಏನಾದರೂ ತಪ್ಪಿದ್ದರೆ ತನಿಖೆ ಮಾಡಲಿ, ಶಿಕ್ಷೆಯಾಗಲಿ. ನಮ್ಮ ಅಭ್ಯಂತರ ಇಲ್ಲ. ಆದರೆ ಅದಕ್ಕೆ ಒಂದು ವ್ಯವಸ್ಥೆ ಇರುತ್ತದೆ, ರೀತಿ-ನೀತಿ ಇರುತ್ತದೆ. ಐಎಎಸ್ ಅಧಿಕಾರಿಗಳು ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ ಎಂದಿದ್ದಾರೆ.