ಮೈಸೂರು, ಸೆ. 05 (DaijiworldNews/PY): "ಎಲ್ಲಾ ಸರ್ಕಾರಗಳ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಆಗಿದೆ. ಕೇವಲ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾತ್ರವೇ ಬೆಲೆ ಏರಿಕೆ ಆಗಿಲ್ಲ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಆಗಿದೆ. ಹಾಗೇಯೇ ಬಿಜೆಪಿಯಲ್ಲೂ ಬೆಲೆ ಏರಿಕೆ ಆಗಿದೆ. ಅದನ್ನು ಮೋದಿ ಸರ್ಕಾರ ನಿಯಂತ್ರಿಸುವ ಪ್ರಯತ್ನ ಮಾಡುತ್ತಿದ್ದಾರೆ" ಎಂದಿದ್ದಾರೆ.
"ಕಾಂಗ್ರೆಸ್ ವಿದೇಶಿ ಸಂಸ್ಕೃತಿಯಲ್ಲೇ ಬೆಳೆದುಬಂದಿರುವ ಕಾರಣ ಸ್ವದೇಶಿ ಚಿಂತನೆ ಇಲ್ಲ. ಈ ಹಿನ್ನೆಲೆ ಕಾಂಗ್ರೆಸ್ನ ನೀತಿ ರಲ್ಲವನ್ನೂ ವಿರೋಧಿಸುವುದು. ಪ್ರಧಾನಿ ನರೇಂದ್ರ ಮೋದಿ ಅವರು ತರುವ ಉತ್ತಮವಾದ ನೀತಿಗಳನ್ನು ಕಾಂಗ್ರೆಸ್ ವಿರೋಧಿಸುವುದು" ಎಂದು ಹೇಳಿದ್ದಾರೆ.
"ಈವರೆಗೆ ಕೈಗೊಂಡ ಯಾವುದೇ ನಿರ್ಧಾರಕ್ಕೆ ರಾಷ್ಟ್ರದ ಹಿತಾಸಕ್ತಿಯಿಂದ ಬೆಂಬಲಿಸಿಲ್ಲ. ಇಷ್ಟೆಲ್ಲಾ ವಿರೋಧಿಸುವವರಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ?" ಎಂದು ಪ್ರಶ್ನಿಸಿದ್ದಾರೆ.