ಬೆಂಗಳೂರು, ಸೆ. 05 (DaijiworldNews/SM): ಸದ್ಯ ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಸಮರ್ಪಕ ಕ್ರಮ ಕೈಗೊಳ್ಳುತ್ತಿದೆ. ಒಂದೊಮ್ಮೆ ಸೋಂಕು ಏರಿಕೆಯಾದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಬೇರೆ ಬೇರೆ ರಾಜ್ಯಗಳಿಂದ ವಿದ್ಯಾರ್ಥಿಗಳು ನಮ್ಮ ರಾಜ್ಯಕ್ಕೆ ಬರುತ್ತಿದ್ದಾರೆ. ಇಲ್ಲಿ ಬಂದ ಬಳಿಕ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ. ಅದನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನೊಂದೆಡೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯವಿಲ್ಲ. ಒಂದೊಮ್ಮೆ ರಾಜ್ಯದಲ್ಲಿ ಸೋಂಕು ಏರಿಕೆಯಾದಲ್ಲಿ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.