ಲಕ್ನೋ, ಸ.06 (DaijiworldNews/HR): ವಿವಿಧ ರಾಜ್ಯಗಳಿಂದ ಸಾವಿರಾರು ರೈತರು ಭಾಗವಹಿಸಿದ್ದ ಮಹಾ ಪಂಚಾಯತ್ನಲ್ಲಿ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಲಾಗಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಉತ್ತರಪ್ರದೇಶ ಮತ್ತು ಉತ್ತರಾಖಂಡ್ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ಹೆಸರಿನಲ್ಲಿಯೇ ಬಿಜೆಪಿಯವರು ಪ್ರಚಾರ ಮಾಡುತ್ತಾರೆ. ನಾವು ಕೂಡ ಮೋದಿ ಹೆಸರಿನಲ್ಲಿಯೇ ಬಿಜೆಪಿಯ ವಿರುದ್ಧ ಪ್ರಚಾರ ಮಾಡುತ್ತೇವೆ" ಎಂದು ಘೋಷಿಸಿದ್ದಾರೆ.
ಇನ್ನು "ಉತ್ತರಪ್ರದೇಶ ಮತ್ತು ಉತ್ತರಾಖಂಡ್ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿಯೇ ಬಿಜೆಪಿ ವಿರುದ್ಧ ಪ್ರಚಾರ ನಡೆಸುತ್ತೇವೆ, ವಿವಿಧ ರಾಜ್ಯಗಳಿಂದ ಸಾವಿರಾರು ರೈತರು ಭಾಗವಹಿಸಿದ್ದ ಮಹಾ ಪಂಚಾಯತ್ ನಲ್ಲಿ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ.